Breaking News

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಗ್ರಾಮೀಣ ಪತ್ರಕರ್ತರಿಗೆ ವೃತ್ತಿಗೆ ಸಂಬಂಧಿ ಚಟುವಚಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.
ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 431ರಲ್ಲಿ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್‌ ಸೌಲಭ್ಯವನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *