Breaking News

ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ತುಮಕೂರು ಜಿಲ್ಲೆಯ 29 ಗ್ರಾಮಗಳು ಆಯ್ಕೆ

ತುಮಕೂರು: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ತುಮಕೂರು, ಕೊರಟಗೆರೆ, ಸಿರಾ, ಪಾವಗಡ, ಮಧುಗಿರಿ, ಗುಬ್ಬಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯ 29 ಗ್ರಾಮ ಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌರ್ಯಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ 79156 ಕೋಟಿ ಅನುದಾನದಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63000 ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಈ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಯನ್ನು ಅನುಷ್ಟಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024-25 ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *