Breaking News

ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಜೆ.ಅಬ್ಬಾಸ್‌ ಮುಲ್ಲಾ ಆಯ್ಕೆ

ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ರಾಜ್ಯದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್‌ ಮುಲ್ಲಾ ಅವರು ಆಯ್ಕೆಯಾಗಿದ್ದಾರೆ.

ಸುಮಾರು 25 ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅವಿಸ್ಮರಣೀಯ ಸೇವೆಯನ್ನು ಸಲ್ಲಿಸಿರುವ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಅವರು ಈ ಹಿಂದೆ ಧಾರವಾಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸಿದ್ದು, ಈಗ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿರುವುದು ಧಾರವಾಡ ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

ಇನ್ನೂ ಹಿರಿಯ ಪತ್ರಕರ್ತರಾದ ಜೆ. ಅಬ್ಬಾಸ್ ಮುಲ್ಲಾ ಅವರು ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಾಗೂ ಪತ್ರಕರ್ತರ ಬಳಗದಿಂದ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *