Breaking News

5,800 ಎಕರೆ ಪ್ರದೇಶದಲ್ಲಿ ಕ್ವಿನ್ ಸಿಟಿ ಯೋಜನೆ ನಿರ್ಮಾಣ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಕ್ವಿನ್ ಸಿಟಿ ಇದೊಂದು ವೈಶಿಷ್ಟ್ಯ ಪೂರ್ಣ ಯೋಜನೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆ ಉದ್ಘಾಟನೆ ಬಳಿಕ ಅವರು ಮಾತನಾಡಿದರು.
ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ.40ರಷ್ಟು ಜಾಗವನ್ನು ಉದ್ಯಾನವನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇ.50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *