Breaking News

ಸತತ ಮಳೆಯಿಂದಾಗಿ ತೊಗರಿ ಬೆಳೆಗೆ ನೆಟೆ ರೋಗ: ಆತಂಕದಲ್ಲಿ ರೈತರು

ಹುಲಸೂರ: ಸತತ ಸುರಿಯುತ್ತಿರುವ ಮಳೆಯಿಂದ ಮಾಂಜ್ರಾ ತೀರದ ಎರೆ ಜಮೀನುಗಳಲ್ಲಿ ನೀರು ಸಂಗ್ರಹಗೊಂಡಿದ್ದು, ಬಿತ್ತನೆ ಮಾಡಿದ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗುವ ಭೀತಿಯಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಪಟ್ಟಣದ ಸೇರಿದಂತೆ ಮಾಂಜ್ರಾ ತೀರದ ಗ್ರಾಮಗಳಾದ ಹಲಸಿ ತುಗಾಂವ, ಕೊಂಗಳಿ, ವಾಂಜರಖೇಡ, ಮೆಹಕರ, ಬೋಳೆಗಾಂವ ನಾರದಾ ಸಂಗಮ, ಅಟ್ಟರಗಾ, ಸಾಯಗಾಂವ, ಹುಲಸೂರ ಜಮೀನುಗಳಲ್ಲಿ ತೊಗರಿ ಬೆಳೆಗಳ ಮಧ್ಯೆ ನಿಂತ ನೀರು ನೆಟೆ ರೋಗಕ್ಕೆ ಆಹ್ವಾನ ನೀಡುತ್ತಿದೆ. ತೊಗರಿ ಗಿಡಗಳಿಗೆ ಅಲ್ಲಲ್ಲಿ ನೆಟೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.
ಕಪ್ಪು ಮಿಶ್ರಿತ ಭೂಮಿಯಿದ್ದು, ಹಸಿ ತೇವಾಂಶ ಸಮಸ್ಯೆ ಕಾಡುತ್ತಿದೆ. ಮಳೆ ಇದೇ ರೀತಿ ಮುಂದುವರಿದರೆ ಸಮಸ್ಯೆ ಮತ್ತಷ್ಟು ಉಲ್ಬಣಿಸಲಿದೆ. ನೀರು ಬಸಿದು ಹೋಗುವ ಮಸಾರಿ ಜಮೀನುಗಳಲ್ಲಿ ಬಿತ್ತಿರುವ ತೊಗರಿಗೂ ಆಪತ್ತು ಎದುರಾಗಲಿದೆ ಎಂಬುದು ರೈತರ ಆತಂಕಕ್ಕೆ ಕಾರಣವಾಗಿದೆ.
ಪಟ್ಟಣದ ಪ್ರಗತಿಪರ ರೈತ ಬಸಪ್ಪಾ ಚೌರೆ, ಈಗ ಬಿತ್ತನೆ ಮಾಡಿದ ತೊಗರಿ ಬೆಳೆಗೆ 15 ದಿನಗಳಿಗೊಮ್ಮೆ ಮಳೆ ಬಂದರೆ ಸಾಕಾಗಿತ್ತು. ಆದರೆ, ಈಗ ಸತತವಾಗಿ ಸುರಿದ ಮಳೆಯಿಂದ ಜಮೀನುಗಳ ಅರ್ಧ ಭಾಗ ನೀರಿನಿಂದ ತುಂಬಿ, ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗಿದೆ. ಈಗ ಬರುತ್ತಿರುವ ಮಳೆ ಇನ್ನೂ ಮುಂದುವರಿದರೆ ಉಳಿದ ಬೆಳೆಯೂ ಹಾಳಾಗುವುದರಲ್ಲಿ ಸಂದೇಹವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *