ಕುಂದಗೋಳ: ಅಕ್ಟೋಬರ್ 17 ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಗೆ ಆಗಮಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ಸಭೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ಎಚ್ಚರಿಕೆ ನೀಡಿದ ಘಟನೆ ಕುಂದಗೋಳದಲ್ಲಿ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಆಯೋಜನೆಗೊಂಡ ಸಭೆಗೆ ಕುಂದಗೋಳ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯ ಅಧಿಕಾರಿಗಳು ಬಾರದೇ ಸಹ ಸಿಬ್ಬಂದಿ ಸಭೆಗೆ ಕಳುಹಿಸಿದ್ದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗರಂ ಆಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

