Breaking News

ಎಥೆನಾಲ್ ಬೆಲೆ ಮತ್ತು ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸಲು ಸರ್ಕಾರ ಚಿಂತನೆ

ನವದೆಹಲಿ: 2024-25 ನೇ ಸಾಲಿನಲ್ಲಿ ಎಥೆನಾಲ್ ಬೆಲೆಯನ್ನು ಮತ್ತು ಸಕ್ಕರೆಯ ಕನಿಷ್ಠ ಮಾರಾಟದ ಬೆಲೆಯನ್ನು ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಎಥೆನಾಲ್ ಬೆಲೆ ಏರಿಕೆಯ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಪೆಟ್ರೋಲಿಯಂ ಸಚಿವಾಲಯವು ಈ ವಿಷಯವನ್ನು ಪರಿಶೀಲಿಸುತ್ತಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಾಹಿತಿ ನೀಡಿದ್ದಾರೆ.
ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುತ್ತಿದೆ. ಫೆಬ್ರವರಿ 2019 ರಲ್ಲಿ ಕೆಜಿಗೆ 31 ರೂ. ಇದ್ದ ದರ ಬದಲಾಗದೆ ಉಳಿದಿದೆ. ಉತ್ತಮ ಮುಂಗಾರು ಮಳೆಯಿಂದಾಗಿ 2024-25ರ ಋತುವಿನಲ್ಲಿ(ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ ಉತ್ಪಾದನೆಯು ಉತ್ತಮವಾಗಿರಲಿದೆ ಎಂದು ಅವರು ಹೇಳಿದರು.
2022-23 ಎಥೆನಾಲ್ ಪೂರೈಕೆ ವರ್ಷದಿಂದ(ನವೆಂಬರ್-ಅಕ್ಟೋಬರ್) ಸರ್ಕಾರವು ನಿಗದಿಪಡಿಸಿದ ಎಥೆನಾಲ್ ಬೆಲೆಗಳನ್ನು ಹೆಚ್ಚಿಸಲಾಗಿಲ್ಲ. ಪ್ರಸ್ತುತ, ಕಬ್ಬಿನ ರಸದಿಂದ ಉತ್ಪತ್ತಿಯಾಗುವ ಎಥೆನಾಲ್ ಬೆಲೆ ಲೀಟರ್‌ಗೆ 65.61 ರೂ ಆಗಿದ್ದರೆ, ಬಿ-ಹೆವಿ ಮತ್ತು ಸಿ-ಹೆವಿ ಮೊಲಾಸಸ್‌ನಿಂದ ಎಥೆನಾಲ್‌ನ ದರಗಳು ಕ್ರಮವಾಗಿ ಲೀಟರ್ ಗೆ 60.73 ರೂ. ಮತ್ತು 56.28 ರೂ. ಇದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *