Breaking News

ಹೆಣ್ಣು ಮಕ್ಕಳ ಅಭ್ಯುದಯಕ್ಕಾಗಿ ಸುಕನ್ಯಾ ಸಮೃದ್ಧ ಯೋಜನೆ

ನವದೆಹಲಿ: ಹೆಣ್ಣು ಮತ್ತು ಗಂಡು ಮಧ್ಯೆ ಬೌದ್ಧಿಕ ಅಂತರ ಉಳಿದಿಲ್ಲ. ಮೊದಲಿದ್ದಂತೆ ಹೆಣ್ಣು ಮಕ್ಕಳು ಅಡುಗೆ ಮನೆಗೆ ಸೀಮಿತವಾಗಿಲ್ಲ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಗಂಡಿಗೆ ಸರಿಸಮಾನವಾಗಿ ನಿಲ್ಲಲು ಹೆಣ್ಣು ನಿರಂತರ ಪ್ರಯತ್ನ ಮಾಡುತ್ತಿದ್ದಾಳೆ.
ಹೆಣ್ಣು ಮಕ್ಕಳು ಈಗ ಅಬಲೆಯಾಗಿ ಉಳಿದಿಲ್ಲ. ಸರ್ಕಾರ ಕೂಡ ವಿವಿಧ ಯೋಜನೆಗಳ ಮೂಲಕ ಹೆಣ್ಮಕ್ಕಳನ್ನು ಬಲಾಢ್ಯಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ. ಭಾರತದ ಆರ್ಥಿಕತೆ ಅಗಾಧವಾಗಿ ಬೆಳೆಯಲು ಶುರುವಾಗಿರುವ ಈ ಹೊತ್ತಲ್ಲಿ ಮತ್ತು ಮುಂಬರುವ ವರ್ಷಗಳಲ್ಲಿ ದೇಶದ ಉನ್ನತಿಗೆ ಹೆಣ್ಣು ಮಕ್ಕಳ ಪಾತ್ರ ಬಹಳ ಮಹತ್ತರದ್ದು. ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಿನ್ನೆಲೆಯಲ್ಲಿ ಸರ್ಕಾರ ಹೆಣ್ಣು ಮಕ್ಕಳಿಗೆ ರೂಪಿಸಿರುವ ಯೋಜನೆಗಳ ಬಗ್ಗೆ ಮಾಹಿತಿ ಇರುವ ಒಂದು ಪುಟ್ಟ ಕೈಪಿಡಿಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ಬಿಡುಗಡೆ ಮಾಡಿದೆ.
ಹೆಣ್ಮಗುವಿನ ಅಭ್ಯುದಯಕ್ಕಾಗಿ ಸರ್ಕಾರ ಕೈಗೊಂಡಿರುವ ಸುಕನ್ಯ ಸಮೃದ್ಧಿ ಯೋಜನೆ ಶುರುವಾಗಿ ಹತ್ತಿರ ಹತ್ತಿರ 10 ವರ್ಷಗಳಾಗುತ್ತಿವೆ. ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಪೈಕಿ ಸುಕನ್ಯ ಸಮೃದ್ಧಿ ಯೋಜನಗೆ ಗರಿಷ್ಠ ಬಡ್ಡಿ ಸಿಗುತ್ತದೆ. ಈವರೆಗೆ ಈ ಯೋಜನೆ ಅಡಿಯಲ್ಲಿ ಮೂರು ಕೋಟಿಗೂ ಹೆಚ್ಚು ಖಾತೆಗಳು ತೆರೆಯಲಾಗಿವೆ. ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಭಾಗವಾಗಿ ಪಿಎಂ ಎಸ್​ಎಸ್​ವೈ ಯೋಜನೆ ಆರಂಭಿಸಲಾಗಿತ್ತು. ಹತ್ತು ವರ್ಷದಲ್ಲಿ ಸಾಕಷ್ಟು ಜನರನ್ನು ಇದು ಸೆಳೆದಿರುವುದು ಗಮನಾರ್ಹ ಸಂಗತಿ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *