Breaking News

ಸಮುದಾಯದ ಅಭಿವೃದ್ದಿಯು ಶಿಕ್ಷಣ ಮತ್ತು ದುಡಿಮೆಯಿಂದ ಸಾಧ್ಯ: ಬಸವರಾಜ ರಾಯರೆಡ್ಡಿ

ಯಲಬುರ್ಗಾ: ಸಮುದಾಯದ ಅಭಿವೃದ್ಧಿಯು ಶಿಕ್ಷಣ ಮತ್ತು ದುಡಿಮೆಯಿಂದ ಸಾಧ್ಯ. ಜತೆಗೆ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಬಹುಮುಖ್ಯ ಪಾತ್ರವಾಗುತ್ತದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಗಾಣಿಗ ಸಮಾಜದ ವತಿಯಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗಾಣಿಗ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಪ್ರದೇಶದಲ್ಲಿ ನಿವೇಶನ ಒದಗಿಸಿದರೆ ₹8 ಕೋಟಿ ಅನುದಾನ ನೀಡಲಾಗುವುದು. ಈ ಬಗ್ಗೆ ಸಮುದಾಯದ ಮುಖಂಡರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.
ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿ, ದೊಡ್ಡ ಸಮಾಜದವರು ಎಂದುಕೊಂಡು ಕುಳಿತರೆ ಪ್ರಯೋಜನವಿಲ್ಲ. ಎಲ್ಲ ಸಮಾಜದವರೊಂದಿಗೆ ಉತ್ತಮ ಸ್ನೇಹ-ಸಂಬಂಧ ಹೊಂದಿರಬೇಕು. ಹೊಂದಾಣಕೆಯಿದ್ದರೆ ಮಾತ್ರ ರಾಜಕೀಯದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಸಮಾಜದ ವತಿಯಿಂದ ಯಾವುದೇ ಶಿಕ್ಷಣ ಸಂಸ್ಥೆ ಅಥವಾ ವಿದ್ಯಾರ್ಥಿ ನಿಲಯ ಅಥವಾ ಇನ್ನಿತರ ಯಾವುದೇ ಬಹು ಉಪಯೋಗಿ ಕಾರ್ಯಕ್ರಮವನ್ನು ಹಮ್ಮಿಕೊಂಡರೆ ಸಂಸದ ನಿಧಿಯಿಂದ ಆರ್ಥಿಕ ನೆರವು ನೀಡುವುದಾಗಿ ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *