ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ಡಾ.ಕೆ.ಸುಧಾಕರ್ ನೇಮಕ ಮಾಡಲಾಗಿದೆ. ಡಾ.ಕೆ.ಸುಧಾಕರ್ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ.
ಇದಕ್ಕೆ ಸಂಸದ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. 2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

