ಮೈಸೂರು: ತಪ್ಪು ಮಾಹಿತಿ ಕೊಟ್ಟ ತೋಟಗಾರಿಕಾ ಇಲಾಖೆಯ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅವರು ಕ್ಲಾಸ್ ತೆಗೆದುಕೊಂಡ ಪ್ರಸಂಗ ನಗರದಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಪ್ಪು ಮಾಹಿತಿ ಮುದ್ರಿಸಿ ನೀಡಿದ್ದರಿಂದ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸಭೆಗೆ ಹಿಂದಿನ ದಿನ ಸರಿಯಾದ ಹೋಂವರ್ಕ್ ಯಾಕೆ ಮಾಡಲಿಲ್ಲ, ಈ ರೀತಿ ತಪ್ಪು ಮಾಹಿತಿ ಮುದ್ರಿಸಿ ಸಭೆಗೆ ನೀಡಿದರೆ ನೀವೇ ಹೊಣೆ ಆಗಬೇಕಲ್ವಾ ಎಂದು ಸಿಎಂ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಅಧಿಕಾರಿ ಕ್ಷಮೆ ಕೋರಿ, ಮುಂದೆ ಯಡವಟ್ಟುಗಳು ಆಗದಂತೆ ಎಚ್ಚರಿಕೆ ವಹಿಸುವುದಾಗಿ ತಪ್ಪೊಪ್ಪಿಕೊಂಡು, ತಿದ್ದಿಕೊಳ್ಳುವುದಾಗಿ ಸಭೆಗೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

