Breaking News

ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಣೆ: ಎನ್‌.ಹೆಚ್‌. ಕೋನರಡ್ಡಿ

ನವಲಗುಂದ: ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಜಾರಿಗೊಳಿಸಲಾಗಿದೆ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮುಧು ಬಂಗಾರಪ್ಪ ಅವರ ನಿರ್ಧಾರದ ಮೇಲೆ ಮೊದಲು ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆ ವಾರದಲ್ಲಿ 2 ದಿನ ಮೊಟ್ಟೆ ವಿತರಿಸಿತ್ತಿದ್ದರು. ಇನ್ನು ಮುಂದೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸಲಾಗುವುದು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಂಡ ನಿರ್ಧಾರ ಈ ಯೋಜನೆಯಿಂದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೀಡಲಾಗುವುದು ಇದಕ್ಕೆ ಅಜಂ ಪ್ರೇಮ್ ಪೌಂಡೇಶನ್ ಇವರು ಸರ್ಕಾರದ ಜೊತೆ ಕೈಜೋಡಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನವಲಗುಂದ ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಉಪಾಧ್ಯಕ್ಷೆ ಫರೀದಾಬೇಗಂ ಬಬರ್ಚಿ, ಸ್ಥಾಯಿ ಸಮಿತಿಯ ಚೇರಮನ್ ಮಹಾಂತೇಶ ಭೋವಿ, ಸದಸ್ಯರುಗಳಾದ ಮಂಜುನಾಥ ಜಾಧವ, ಮೋದಿನಸಾಬ ಶಿರೂರ. ಜೀವನ ಪವಾರ,

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *