Breaking News

ಭಾರತೀಯ ಸೇನೆಯ ಫಿರಂಗಿ ದಳದ ಸಾಮರ್ಥ್ಯ ಹೆಚ್ಚಳ

ನವದೆಹಲಿ: ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಫಿರಂಗಿ ದಳವು ಅತ್ಯಾಧುನಿಕ ಯುದ್ಧ ಸಾಮಗ್ರಿಗಳನ್ನು ಹೊಂದುವ ಮೂಲಕ ತನ್ನ ಸಾಮರ್ಥ್ಯ ಹೆಚ್ಚಿಸುತ್ತಿದೆ.
ರಾಷ್ಟ್ರೀಯ ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಮನಗಂಡು ಫಿರಂಗಿ ದಳದ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಯುದ್ಧ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ ಎಂದು ಸೇನೆಯ ಫಿರಂಗಿ ದಳದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅದೋಷ್ ಕುಮಾರ್ ತಿಳಿಸಿದ್ದಾರೆ.
ಫಿರಂಗಿ ದಳವನ್ನು ನಾವು ಹಿಂದೆಂದೂ ಕಾಣದಂತಹ ವೇಗದಲ್ಲಿ ಅಧುನೀಕರಣಗೊಳಿಸುತ್ತಿದ್ದೇವೆ ಎಂದು ಆರ್ಟಿಲರಿ ರೆಜಿಮೆಂಟ್‌ನ (ಫಿರಂಗಿ ದಳ) 198ನೇ ವರ್ಷಾಚರಣೆ ಅಂಗವಾಗಿ ಅವರು ತಿಳಿಸಿದರು. ಸೇನೆಯು ಈಗಾಗಲೇ 100 ರಷ್ಟು ಕೆ-9 ವಜ್ರ ಯುದ್ಧ ಟ್ಯಾಂಕ್‌ಗಳನ್ನು ನಿಯೋಜಿಸಿದ್ದು, ಇನ್ನೂ 100 ಯುದ್ಧ ಟ್ಯಾಂಕ್‌ಗಳ ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಾರಂಗ್‌ ಮತ್ತು ಧನುಷ್‌ ಸೇರಿದಂತೆ 155 ಎಂಎಂ ಗನ್‌ ಸಿಸ್ಟಮ್‌ಗಳನ್ನೂ ಗಡಿ ಭಾಗದಲ್ಲಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ಹೈಪರ್‌ಸಾನಿಕ್‌ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು. ಹೈಪರ್‌ಸಾನಿಕ್‌ ಕ್ಷಿಪಣಿಗಳು ಶಬ್ದದ ವೇಗಕ್ಕಿಂತ ಸುಮಾರು ಐದು ಪಟ್ಟು ಅಧಿಕ ವೇಗದಲ್ಲಿ ಸಾಗಬಲ್ಲದು ಎಂದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *