Breaking News

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಂದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರದಾನ

ಧಾರವಾಡ : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು.

ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ ಫಲಾನುಭವಿಗಳೀಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಭಾದಿತ ಪ್ರದೇಶಗಳ ಪುನಃಶ್ಚೇತನಕ್ಕೆ ಅವರು ಹೆಚ್ಚಿನ ಒತ್ತು ನೀಡಿದ್ದರು. ಈ ಎಲ್ಲಾ ಕೊಡುಗೆಗಳನ್ನು ಆಧರಿಸಿ ಅವರಿಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ 2023-24 ನೇ ಸಾಲಿಗೆ ಉತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ವಿ ಮಹೇಶ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *