Breaking News

ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
‌ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ ಜುಲೈ ತಿಂಗಳ ಹಣ ದೊರೆಯಲಿದೆ. ಮಹಿಳೆಯರ ಖಾತೆಗೆ ಕಳೆದೆರಡು ತಿಂಗಳ ಹಣ ಬರಬೇಕಿದ್ದು, ಇದರಲ್ಲಿ ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಜೂನ್‌ ತಿಂಗಳ ಹಣ ಬಂದಿತ್ತು. ಆದರೆ ಸೆಪ್ಟೆಂಬರ್‌ ಮುಗಿಯುತ್ತಾ ಬಂದರೂ ಜುಲೈ ಹಾಗೂ ಆಗಸ್ಟ್‌ ತಿಂಗಳ ಹಣ ಬಂದಿಲ್ಲ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಒಂದಾಗಿದೆ.
ಹಣ ಜಮೆ ಆಗದಿರುವುದಕ್ಕೆ ಕಾರಣ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗದಿರುವುದು. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ‌ ಕೇಳಲಾಗಿದೆ. ಒಂದೊಂದೇ ತಿಂಗಳ ಹಣವನ್ನು ಹಣಕಾಸು ಇಲಾಖೆ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ ಜೂನ್‌ ತಿಂಗಳ ಹಣ ಬಿಡುಗಡೆ ಮಾಡಿತ್ತು. ಪ್ರತಿ ತಿಂಗಳು 1.21 ಕೋಟಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಬರಬೇಕು. ಪ್ರತಿ ತಿಂಗಳೂ ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಸೆಪ್ಟೆಂಬರ್‌ ಸೇರಿದಂತೆ ಮೂರು ತಿಂಗಳ ಅನುದಾನ ಅಂದರೆ ಒಟ್ಟು 7500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆಯಲಾಗಿದೆ ಎಂದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *