Breaking News

ಪೇಪರ್ ಖಾತಾಗಳಲ್ಲಿ ನಕಲಿ ನೋಂದಣಿ ತಡೆಗಟ್ಟಲು ಇ-ಖಾತಾ ಕಡ್ಡಾಯ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಪೇಪರ್ ಖಾತಾಗಳ ಆಧಾರದಲ್ಲಿ ಆಗುತ್ತಿರುವ ನಕಲಿ ನೋಂದಣಿಗಳನ್ನು ತಡೆಗಟ್ಟಲು ಇ-ಖಾತಾ ಕಡ್ಡಾಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಲಾಗುವ ಜಮೀನನ್ನು ಇ-ಸ್ವತ್ತು ಎಂದು ಕರೆದರೆ ನಗರ ಭಾಗರದಲ್ಲಿ ಇ-ಆಸ್ತಿ ಎನ್ನಲಾಗುತ್ತದೆ.
ಈ ತಿಂಗಳಿನಿಂದ ನೋಂದಣಿ ಪ್ರಕ್ರಿಯೆಗೆ ಇ-ಖಾತಾ ಕಡ್ಡಾಯ ಎಂದು 12 ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಮುಂದಿನ ವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇ-ಖಾತಾ ಕಡ್ಡಾಯಗೊಳಿಸಲಾಗುವುದು ಎಂದರು.
ನಾನು ಗ್ರಾಮೀಣ ಹಾಗೂ ನಗರ ಭಾಗರ ಜನರನ್ನೂ ಮನವಿ ಮಾಡಿಕೊಳ್ಳುತ್ತೇನೆ. ತಮ್ಮ ಆಸ್ತಿಯನ್ನು ಮಾರಾಟ ಮಾಡಬೇಕು ಎಂದರೆ ತತಕ್ಷಣ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗೆ ಹೋಗಿ ಇ-ಖಾತಾ ಪಡೆದುಕೊಳ್ಳಬೇಕು. ಇದರ ಸಹಾಯದಿಂದ ಮಾತ್ರ ನಕಲಿ ನೊಂದಣಿ ತಡೆಯುವುದು ಸಾಧ್ಯ ಎಂದು ಕೃಷ್ಣ ಬೈರೇಗೌಡ ಮನವಿ ಮಾಡಿದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *