Breaking News

ಮಹಾನಗರ ಪಾಲಿಕೆಯಲ್ಲಿ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದ ಸರ್ಕಾರ: ಸಚಿವ ರಹೀಂಖಾನ್

ಬೀದರ್ : ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು.
ರಾಜ್ಯ ಪೌರ ನೌಕರರ ಸಂಘದಿಂದ ನಗರದ ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಒಂದು ದಿನದ ರಜೆ ಕೂಡ ಘೋಷಿಸಲಾಗಿದೆ ಎಂದ ಅವರು ಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ವಾಟರ್ ಮೆನ್ ಹಾಗೂ ಚಾಲಕರ ಸೇವೆಯನ್ನು ಕಾಯಂಗೊಳಿಸುವ ದಿಸೆಯಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು. ನಗರ, ಪಟ್ಟಣಗಳನ್ನು ಸ್ವಚ್ಛ, ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ಮಹತ್ವದ್ದಾಗಿದೆ. ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ತಿಳಿಸಿದರು. ಹೊರ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ 48 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *