ಮುಂಬಯಿ: ಮಾಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದು, ಶನಿವಾರ(ಸೆ.28) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಜೀವ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಸಮ್ಮುಖದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಚುನಾವಣೆ ಸಿದ್ಧತೆಗಳ ಕುರಿತು ಮಹಾರಾಷ್ಟ್ರದ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.
ಮಹಾರಾಷ್ಟ್ರದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಾಗಿ ನಾವು ಇಲ್ಲಿಗೆ ಬಂದಿದ್ದು, ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿದ್ದೇವೆ. ಮಧ್ಯಸ್ಥಗಾರರು, ಡಿಎಂ, ಪೊಲೀಸ್ ಆಯುಕ್ತರು, ಡಿಜಿಪಿ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವಂತೆ ಆದೇಶಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯ ವೇಳೆ ನಡೆದ ಚುನಾವಣೆ ಅಪರಾಧಗಳ ತನಿಖೆಯನ್ನು ತ್ವರಿತಗೊಳಿಸುವಂತೆ ರಾಜ್ಯ ಪೊಲೀಸರನ್ನು ಒತ್ತಾಯಿಸಿದ್ದಾರೆ.
ದೀಪಾವಳಿಯಂತಹ ಪ್ರಮುಖ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು. ಪ್ರಜಾಪ್ರಭುತ್ವದ ಹಬ್ಬಕ್ಕೆ ಮಹಾರಾಷ್ಟ್ರ ಕೊಡುಗೆ ನೀಡುತ್ತದೆ ಎಂಬ ವಿಶ್ವಾಸ ನನಗಿದೆ ಮುಂದಿನ ತಿಂಗಳು ಚುನಾವಣೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

