ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ಸಂಘಗಳು, ಪಂಚಾಯತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅಕ್ಟೋಬರ್ 4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಈ ಕುರಿತು ಪಿಡಿಓ ಸಂಘದ ಜಿಲ್ಲಾಧ್ಯಕ್ಷೆ ಪುಷ್ಪಾವತಿ ಮೇದಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಂಚಾಯತಿ ಕಚೇರಿಯಿಂದ ಮೂಲಭೂತ ಸೌಕರ್ಯ ಹೊರತುಪಡಿಸಿ ಉಳಿದೆಲ್ಲಾ ಸೌಲಭ್ಯದಿಂದ ದೂರ ಉಳಿದು ಪ್ರತಿಭಟನೆ ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪಂಚಾಯತಿ ಅಧಿಕಾರಿಗಳು, ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

