Breaking News

ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರ ಮಾಡಲಾಗುವುದು : ಪ್ರಸಾದ್‌ ಅಬ್ಬಯ್ಯ

ಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯುತ್ತಮ ಹಾಗೂ ಮಾದರಿಯಾದಂತಹ ಬಡಾವಣೆ ನಿರ್ಮಿಸಲು ದೂರದೃಷ್ಟಿಯನ್ನು ಇಟ್ಟುಕೊಳ್ಳಲಾಗಿತ್ತು. ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ನಡೆದಿವೆ. ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್‌ ಅಬ್ಬಯ್ಯ ಹೇಳಿದ್ದಾರೆ.

ಇಂದು ಮಂಟೂರು ರಸ್ತೆಯಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ 1300 ಮನೆಗಳನ್ನು ವೀಕ್ಷಣೆ ಮಾಡಿದ ಬಳಿಕ ಅವರು
ಮಾತನಾಡಿದರು.

ಈ ಭಾಗದಲ್ಲಿ ಅದರಲ್ಲೂ ಕೊಳಚೆ ಪ್ರದೇಶದಲ್ಲಿ ಹೆಚ್ಚಿನ ಜನರು ವಾಸಿಸುತ್ತಿರುವುದರಿಂದ ಅವರಿಗಾಗಿ ಅತ್ಯುತ್ತಮ ವಸತಿ ಮನೆಗಳನ್ನು ನಿರ್ಮಾಣ ಮಾಡಬೇಕು ಎಂಬ ಕನಸು ಹೊಂದಲಾಗಿತ್ತು. ಕಡು ಬಡವರಿಗೆ ಕೊಳಗೇರಿ ವಸತಿ ಮನೆಗಳು, ಮೂಲ ಸೌಕರ್ಯ ಮತ್ತು ಹಕ್ಕು ಪತ್ರಗಳನ್ನು ವಿತರಣೆ ಮಾಡುವ ಯೋಜನೆಯನ್ನು ಇಟ್ಟುಕೊಳ್ಳಲಾಗಿದೆ. ಆದಷ್ಟು ಬೇಗನೆ ಹಂತ ಹಂತವಾಗಿ ಕೆಲಸ ಕಾರ್ಯಗಳನ್ನು ಮಾಡಲಾಗುವುದು. ಜಿಲ್ಲೆಯಲ್ಲಿ 7,600 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿವೆ ಎಂದು ತಿಳಿಸಿದರು.

ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಮೊದಲ ಹಂತದಲ್ಲಿ 36,700 ಮನೆಗಳನ್ನು ಫೆಬ್ರವರಿ ತಿಂಗಳಿನಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಿದ್ದಾರೆ. ಎರಡನೇ ಹಂತದಲ್ಲಿ ಸುಮಾರು 32,600 ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ತಿಂಗಳಲ್ಲಿ ಮನೆಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಅದೇ ಸಂದರ್ಭದಲ್ಲಿ ಇಲ್ಲಿನ 1300 ಮನೆಗಳಲ್ಲಿ ಸುಮಾರು 550 ಮನೆಗಳನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಹಸ್ತಾಂತರಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಮುಂದಿನ ಹಂತದ ಮನೆಗಳನ್ನು ವೇಗವಾಗಿ ನಿರ್ಮಿಸಿ, ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು. ತಾಂತ್ರಿಕ ದೋಷಗಳು ಹಾಗೂ ಇತರೆ ತೊಂದರೆಗಳಿಂದ ಮನೆಗಳ ನಿರ್ಮಾಣ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ವಸತಿ ಸಚಿವರು ಭೇಟಿ ನೀಡಿದಾಗ ಸಹ ಮನೆಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕು. ಕೊನೆ ಹಂತದ ನಿರ್ಮಾಣವನ್ನು ಚನ್ನಾಗಿ ಮಾಡುವಂತೆ ಇಂಜಿನಿಯರ್‌ಗಳಿಗೆ ಸೂಚನೆಗಳನ್ನು ನೀಡಿದ್ದರು. ಅದರಂತೆ ಈಗ ಅಚ್ಚುಕಟ್ಟಾಗಿ ಮನೆಗಳನ್ನು ನಿರ್ಮಾಣ ಮಾಡುವಂತೆ ಇಂಜಿನಿಯರ್‌ಗಳಿಗೆ ನಾನು ಸಹ ಖುದ್ದಾಗಿ ಭೇಟಿ ನೀಡಿ, ಸಲಹೆ ಸೂಚನೆಗಳನ್ನು ನೀಡುತ್ತಿದ್ದೇನೆ ಎಂದು ವಿವರಿಸಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *