ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ 2024-25 ನೇ ಸಾಲಿನ 15 ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಮಾರ್ಗಸೂಚಿ ಪ್ರಕಟಿಸಿದೆ.
ಶೇ.60ರ ನಿರ್ಬಂಧಿತ ಅನುದಾನದಲ್ಲಿ ಗ್ರಾಮಾಂತರ ಪ್ರದೇಶದ ನೈರ್ಮಲೀಕರಣ, ಬಯಲು ಬಹಿರ್ದೆಸೆ ಮುಕ್ತ, ಕುಡಿಯುವ ನೀರು ಸರಬರಾಜು, ಮಳೆ ನೀರು ಕೊಯ್ಲು ಮತ್ತು ನೀರು ಮರು ಬಳಕಗೆ ಸಂಬಂಧಿಸಿದಂತಹ ಕೆಲಸ ಕಾರ್ಯಗಳಿಗೆ ಬಳಕೆ ಆದ್ಯತೆ ನೀಡಲು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದೆ.
ಕೇಂದ್ರ ಸರ್ಕಾರದ ಪತ್ರದ ಪ್ರಕಾರ ಶೇ.60ರಷ್ಟು ಅನುದಾನ ನಿರ್ಬಂಧಿತ ಅನುದಾನವಾಗಿದ್ದು, ಅದರಲ್ಲಿ ಶೇ.50ರಷ್ಟು ಅನುದಾನವನ್ನು ಕಡ್ಡಾಯವಾಗಿ ಕುಡಿಯುವ ನೀರು ಮತ್ತು ಶೇ.50ರಷ್ಟು ಅನುದಾನವನ್ನು ಕಡ್ಡಾಯವಾಗಿ ನೈರ್ಮಲ್ಯ, ಕಾಪಾಡಲು ಬಳಸಬೇಕು. ಒಂದು ವೇಳೆ ಯಾವುದಾದರೂ ಗ್ರಾಮ ಪಂಚಾಯಿತಿಯಲ್ಲಿ, ಕುಡಿಯುವ ವೀರು ಆಗಲಿ ಅಥವಾ ನೈರ್ಮಲೀಕರಣ ಚಟುವಟಿಕೆಗಳು ಪೂರ್ಣಗೊಂಡಿದ್ದರೆ ಅಂತಹ ಗ್ರಾಮ ಪಂಚಾಯಿತಿಗಳು ಕೇವಲ ಮತ್ತೊಂದು ಅಂಶಕ್ಕೆ ಮಾತ್ರ ಯೋಜನೆಯನ್ನು ತಯಾರಿಸಿ ಅನುಷ್ಕಾನಗೊಳಿಸಬಹುದು. ಗ್ರಾಮ ಪಂಚಾಯತಿಗಳಿಗೆ ಲಭ್ಯವಾಗಿರುವ ಅನುದಾನದಲ್ಲಿ ಶೇ.5 ರಷ್ಟು ಅನುದಾನವನ್ನು, ವಿಶೇಷಚೇತನರಿಗೆ ಸಂಬಂಧಿಸಿದ ಕಾಮಗಾರಿಗಳನ್ನು ತೆಗೆದುಕೊಳ್ಳಲು ಮೀಸಲಿರಿಸತಕ್ಕದ್ದು, ವೈಯಕ್ತಿಕ ಸವಲತ್ತುಗಳನ್ನು ನೀೀಡಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2637.00 ಕೋಟಿ ರೂ. ನಿಗದಿಪಡಿಸಲಾಗಿದೆ. ಈ ಅನುದಾನದಲ್ಲಿ ರಾಜ್ಯ ಸರ್ಕಾರ ಶೇ.85 ರಷ್ಟು ಅಂದರೆ 2241.45 ಕೊಟಿ ರೂ.ಗಳ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ, ಶೇ.10 ರಷ್ಟು ಅಂದರೆ 263.70 ಕೋಟಿ ರೂ. ಅನುದಾನವನ್ನು ತಾಲೂಕು ಪಂಚಾಯಿತಿಗಳಿಗೆ, ಶೇ.5 ರಷ್ಟು ಅಂದರೆ 131.85 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯಿತಿಗೆ ನಿಗದಿಪಡಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಆಯೋಗದ ನಿರ್ಬಂಧಿತ ಅನುದಾನದಡಿ ನಿಗದಿಪಡಿಸಿರುವ ಅನುದಾನವನ್ನು ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳ ಶೌಚಾಲಯ ನಿರ್ಮಿಸಲು ಬಳಸಬೇಕು. ಸರ್ಕಾರಿ ಆಸ್ಪತ್ರೆಗಳು ಮತ್ತು ಸಾರ್ವಜನಿಕ ವಸತಿ ನಿಲಯಗಳಿಗೆ ಹೆಚ್ಚುವರಿ ಕುಡಿಯುವ ನೀರಿನ ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆಗೆ ಬಳಸಲು ಮೀಸಲಿರಸಬೇಕು. ಗ್ರಾಪಂ. ವ್ಯಾಪ್ತಿಯಲ್ಲಿ ನಿರ್ವಹಿಸುವ ಚರಂಡಿ ಕಾಮಗಾರಿಗಳನ್ನು ಉದ್ಯೋಗ ಕತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

