Breaking News

ಶಾಲೆಯ ಎರಡು ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿದ ಜೋಶಿ

ಧಾರವಾಡ: ಕಲಘಟಗಿ ತಾಲೂಕಿನ ಮುರಕಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭೂಮಿಪೂಜೆ ನೆರವೇರಿಸಿದರು.

ಎರಡು ಕೊಠಡಿ ನಿರ್ಮಾಣಕ್ಕೆ 29 ಲಕ್ಷ ರೂಪಾಯಿ ಸಿಎಸ್‌ಆ‌ರ್ ಅನುದಾನ ದೊರೆತಿದ್ದು, ಆ ಅನುದಾನದಲ್ಲಿ ಶಾಲಾ ಮಕ್ಕಳಿಗೆ ಅನುಕೂಲವಾಗಲೆಂದು ಮುರಕಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಚಿವರು ಭೂಮಿಪೂಜೆ ನೆರವೇರಿಸಿದರು.

ಮುರಕಟ್ಟಿ ಗ್ರಾಮದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಜೋಶಿ ಅವರು NTPC ಕಂಪೆನಿಯ ಸಿಎಸ್‌ಆರ್ ಕಾರ್ಯ ಚಟುವಟಿಕೆಯಡಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಿಜೆಪಿ ಮುಖಂಡರಾದ ಶಶಿ ನಿಂಬಣ್ಣನವರ, ಗ್ರಾಮಾಂತರ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಕಲ್ಮಶ ಬೇಲೂರು ಹಾಗೂ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *