Breaking News

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆ: ಅಪ್ಪ ಸಿಎಂ, ಪುತ್ರ ಡಿಸಿಎಂ

ತಮಿಳುನಾಡು: ತಮಿಳುನಾಡು ರಾಜಕೀಯದಲ್ಲಿ ಹೊಸ ಹಾಗೂ ಮಹತ್ವದ ಬದಲಾವಣೆ ಆಗಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಹಾಗೂ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಡಿಎಂಕೆಯ (ದ್ರಾವಿಡ್‌ ಮುನ್ನೇತ್ರ ಕಳಗಂ) ಉತ್ತಾರಧಿಕಾರಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ.
ಇದೀಗ ಅಪ್ಪ ಮುಖ್ಯಮಂತ್ರಿ ಹಾಗೂ ಮಗ ಅದೇ ಸರ್ಕಾರದ ಉಪ ಮುಖ್ಯಮಂತ್ರಿಯಾಗಿರುವ ಅಪರೂಪದ ರಾಜಕೀಯಕ್ಕೆ ತಮಿಳುನಾಡು ಸಾಕ್ಷಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸಚಿವ ಸಂಪುಟ ಪುನರ್‌ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದರು. ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ತಮಿಳುನಾಡು ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ. ತಮಿಳುನಾಡು ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಯಾಗುತ್ತಿದ್ದು, ಹೊಸ ಸಚಿವ ಸಂಪುಟ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸಮಾರಂಭವು ತಮಿಳುನಾಡಿನ ಚೆನ್ನೈ ರಾಜಭವನದಲ್ಲಿ ಸೆಪ್ಟೆಂಬರ್‌ 29ರ (ಭಾನುವಾರ) ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ನೂತನ ಸಚಿವ ಸಂಪುಟ ಸಭೆಯಲ್ಲಿ 6 ಪ್ರಮುಖ ಸಚಿವರ ಖಾತೆಗಳನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *