Breaking News

ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್‌ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಲೀಡ್‌ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣರಿಗೆ ಬ್ಯಾಂಕಿಂಗ್‌ ವ್ಯವಹಾರಗಳ ಅರಿವು ಮೂಡಿಸಬೇಕು.ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬ್ಯಾಂಕುಗಳಲ್ಲಿ ಬಹುದಿನದಿಂದ ಬಾಕಿ ಇರುವ ಸರ್ಕಾರಿ ಯೋಜನೆಯ ಫಲಾನುಭವಿಗಳ ವಿವರವನ್ನು ಆದಷ್ಟು ಬೇಗನೆ ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಬೇಕು. ರೈತ ಹಾಗೂ ಪರಿಶಿಷ್ಟ ಗ್ರಾಹಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು ಎಂದು ತಿಳಿಸಿದರು.

Share News

About BigTv News

Check Also

ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!

ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ …

Leave a Reply

Your email address will not be published. Required fields are marked *