ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನಿವಾಸದಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಸಾರ್ವಜನಿಕರನ್ನು ಮುಕ್ತವಾಗಿ ಭೇಟಿಯಾಗುವ ಮೂಲಕ ಜನರ ಸಮಸ್ಯೆಗಳ ಆಲಿಸಿದರು.
ಹುಬ್ಬಳ್ಳಿಯ ಮಯೂರಿ ಎಸ್ಟೇಟ್‌ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಸಾರ್ವಜನಿಕರು ಹಾಗೂ ವಿವಿಧ ಮೂಲೆಗಳಿಂದ ಆಗಮಿಸಿದ ಸಾರ್ವಜನಿಕರು, ಕೇಂದ್ರ ಸಚಿವರಿಗೆ ಮನವಿಗಳನ್ನು ಸಲ್ಲಿಕೆ ಮಾಡಿದ್ದು, ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ.ಇನ್ನು ಮನವಿಯನ್ನು ಸ್ವೀಕರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ತಕ್ಷಣವೇ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ್ದು, ಜನರ ಅಹವಾಲನ್ನು ಆಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

