ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಕಾಂಗ್ರೆಸ್ ಪಕ್ಷ ರೈತರ ಜೀವನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ದ್ರೋಹ ಮಾಡುವ ಇತಿಹಾಸ ಹೊಂದಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಗಂಭೀರವಾಗಿಲ್ಲ. ಬಿಜೆಪಿ ಸರ್ಕಾರ ಆ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

