Breaking News

ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಒಂದು ದೇಶ, ಒಂದು ಚುನಾವಣೆ ತರಲು ಸಿದ್ಧತೆ ಮುಂದುವರೆದಿದ್ದು, ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಮುಖ ಕಾರ್ಯಸೂಚಿಯಾದ ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಸಂವಿಧಾನದ ತಿದ್ದುಪಡಿಗೆ ಸಂಬಂಧಿಸಿದ ಎರಡು ಮಸೂದೆಗಳು ಸೇರಿ ಒಟ್ಟು ಮೂರು ಮಸೂದೆಗಳನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ಉನ್ನತ ಸಮಿತಿ ಏಕಕಾಲಕ್ಕೆ ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿ ಸಲ್ಲಿಸಿದ್ದ ಶಿಫಾರಸುಗಳಿಗೆ ಇತ್ತೀಚೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈಗ, ಶಿಫಾರಸುಗಳ ಜಾರಿಗೆ ಮುಂದಡಿ ಇಟ್ಟಿದೆ. ಕೋವಿಂದ್ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಪ್ರಸ್ತಾಪಿಸಿತ್ತು. ಸಾರ್ವತ್ರಿಕ ಚುನಾವಣೆಯ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸಬೇಕು ಎಂದು ಹೇಳಿತ್ತು.
ಇದೀಗ ಒಂದುರಾಷ್ಚ್ರ ಒಂದು ಚುನಾವಣೆ ಜಾರಿಗೆ ಎರಡು ಸಂವಿಧಾನ ತಿದ್ದುಪಡಿ ಮಸೂದೆಗಳ ಮೂಲಕ ಸಂವಿಧಾನಕ್ಕೆ 15 ತಿದ್ದುಪಡಿಗಳನ್ನು ಕೈಗೊಳ್ಳಲು ಶಿಫಾರಸು ಮಾಡಿತ್ತು. ಕೋವಿಂದ್ ಸಮಿತಿಯ ಪ್ರಸ್ತಾವನೆಯನ್ನು 2029 ರಿಂದ ಜಾರಿಗೆ ತರಲು ಸರ್ಕಾರ ನಿರ್ಧರಿಸಿದರೆ, 17 ರಾಜ್ಯಗಳು ಮೂರು ವರ್ಷಗಳಿಗಿಂತ ಕಡಿಮೆ ಅವಧಿಗೆ ಅಸೆಂಬ್ಲಿಗಳ ಅಧಿಕಾರಾವಧಿಯನ್ನು ಹೊಂದಿರುತ್ತವೆ. ಇನ್ನು ಕೋವಿಂದ್ ಸಮಿತಿಯು ಮೂರು ವಿಧಿಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ, ಅಸ್ತಿತ್ವದಲ್ಲಿರುವ ಲೇಖನಗಳಲ್ಲಿ 12 ಹೊಸ ಉಪವಿಭಾಗಗಳನ್ನು ಸೇರಿಸುವುದು ಮತ್ತು ಶಾಸಕಾಂಗ ಸಭೆಗಳೊಂದಿಗೆ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ತಿದಿದ್ದುಪಡಿ ಮಾಡುವುದಾಗಿದೆ. ಆ ಮೂಲಕ ಒಟ್ಟು ತಿದ್ದುಪಡಿಗಳು ಮತ್ತು ಹೊಸ ಅಳವಡಿಕೆಗಳ ಸಂಖ್ಯೆ 18ಕ್ಕೆ ಏರಿದಂತಾಗುತ್ತದೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದು ಉದ್ದೇಶಿತ ಮಸೂದೆಗಳಲ್ಲೊಂದು. ಈ ಮಸೂದೆ ಅಂಗೀಕಾರಕ್ಕೆ ಕನಿಷ್ಠ ಶೇ 50ರಷ್ಟು ರಾಜ್ಯಗಳ ಒಪ್ಪಿಗೆ ಅಗತ್ಯ ಎನ್ನಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *