ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ.
ತಮಗೆ ಟ್ಯಾಬ್ ವಿತರಣೆ, ಕಚೇರಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವುದು, ಭತ್ಯೆ ನೀಡುವುದು, ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದರೆ 40 ಲಕ್ಷ ಪರಿಹಾರ ನೀಡುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸುತ್ತಿದ್ದಾರೆ. ಇವರನ್ನು ಭೇಟಿ ಮಾಡಿದ ಅರವಿಂದ ಬೆಲ್ಲದ ಅವರು, ಅವರಿಂದ ಮನವಿ ಪಡೆದು ಸರ್ಕಾರ ಮೂಲಭೂತ ಸೌಕರ್ಯವನ್ನಾದರೂ ಸಿಬ್ಬಂದಿಗೆ ನೀಡಬೇಕು. ಈ ವಿಚಾರವಾಗಿ ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.
ಗ್ರಾಮ ಆಡಳಿತಾಧಿಕಾರಿಗಳು ಧಾರವಾಡ ಡಿಸಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಈ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

