Breaking News

ಲೋಳಸೂರ ಸೇತುವೆ ನಿರ್ಮಾಣಕ್ಕೆ ಶೀಘ್ರ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

ಗೋಕಾಕ: ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್‌ ಆಗುತ್ತದೆ ಈ ಭಾಗದ ಜನರ ಓಡಾಟಕ್ಕೂ ಸಮಸ್ಯೆಯಾಗಿದೆ. ಎತ್ತರದ ಸೇತುವೆ ನಿರ್ಮಾಣದ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಈಗ ಅದಕ್ಕೆ ಕಾಲ ಕೂಡಿಬಂದಿದೆ. ಇನ್ನು ಆರೇ ತಿಂಗಳಲ್ಲಿ ಕಾಮಗಾರಿ ಪೂರ್ಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ, ಹೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಅವರ ಇಲಾಖೆಯ ಪಾತ್ರಗಳನ್ನು ವಿವರಿಸಿದರು ಕಾಂಗ್ರೆಸ್‌ ಮುಖಂಡರೂ ಇದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *