Breaking News

ಬೆಂಗಳೂರಿನಲ್ಲಿ ಅ.4 ರಿಂದ ಗ್ರಾ.ಪಂ ನೌಕರರ ಮುಷ್ಕರ: ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ

ಬೆಂಗಳೂರು : ಅ.4 ರಿಂದ ನಡೆಯಲಿರುವ ಗ್ರಾ. ಪಂ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ ಮಾಡಿದೆ.
ದಿ. 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಶೇ. 70% ರಷ್ಟು ಗಾಮೀಣ ಜನತೆಗೆ ಸೇವೆ ನೀಡುತ್ತಿರುವ ದೊಡ್ಡ ಇಲಾಖೆಯಾಗಿದ್ದು, ಈ ಇಲಾಖೆಯ ಅಧಿಕಾರಿ ನೌಕರರ ಬೇಡಿಕೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಈ ಹಿಂದಿನಿದಲೂ ಸ್ಪಂದಿಸುತ್ತಾ ಬಂದಿರುತ್ತದೆ. ಪ್ರಸ್ತುತ ಇಲಾಖೆಯ ಅಧಿಕಾರಿ ನೌಕರರ ಪ್ರಮುಖ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಇಲಾಖೆಯ ಎಲ್ಲಾ ವೃಂದ ಸಂಘಗಳು ದಿ. 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವದಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲವನ್ನು ನೀಡಿರುತ್ತದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *