Breaking News

ಪಾದಚಾರಿಗೆ ಡಿಕ್ಕಿ ಹೊಡೆದ ದ್ವಿಚಕ್ರ ಸವಾರ

ಕುಂದಗೋಳ : ದ್ವಿಚಕ್ರ ಸವಾರನೋರ್ವ ವಾಹನದ ವೇಗ ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು ಹೊರಟಿದ್ದ ಪಾದಚಾರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಗೋಳ ತಾಲೂಕಿನ ಚಾಕಲಬ್ಬಿ ದೈಹಿಕ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಲ್ಲಪ್ಪ ಲಕ್ಷ್ಮಣ ಬಾರಕೇರ ಎಂಬುವವರು ರೊಟ್ಟಿಗವಾಡ ಮಾರ್ಗವಾಗಿ ನಲವಡಿ ಕಡೆ ಅತಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದು ನಿಯಂತ್ರಣ ಮಾಡಲಾಗದೆ ರಸ್ತೆ ಬದಿ ನಡೆದುಕೊಂಡು ಹೊರಟಿದ್ದ ಈರಯ್ಯ ಹಿರೇಮಠ ಎಂಬುವವರಿಗೆ ಅಪಘಾತಪಡಿಸಿ ಸವಾರ ಸಹ ಗಾಯ ಮಾಡಿಕೊಂಡಿದ್ದಾರೆ.ಸೆಪ್ಟೆಂಬರ್.28 ರಂದು ಈ ಘಟನೆ ನಡೆದಿದ್ದು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *