ಧಾರವಾಡ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕುರಿತು ಎಡಿಜಿಪಿ ಎಂ.ಚಂದ್ರಶೇಖರ್ ಅವರು ಬಳಸಿದ ಪದಗಳನ್ನು ವಿರೋಧಿಸಿ ಧಾರವಾಡದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಎಡಿಜಿಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಒಬ್ಬ ಕೇಂದ್ರ ಸಚಿವರಿಗೆ ಇವರು ಕೆಟ್ಟ ಪದಗಳನ್ನು ಬಳಕೆ ಮಾಡಿ ಮಾತನಾಡುತ್ತಾರೆ. ಇಂತಹ ಅಧಿಕಾರಿ ಮೇಲೆ ಕೇಂದ್ರ ಗೃಹ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

