ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.
ಧಾರವಾಡ ನಗರದಾದ್ಯಂತ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಿವೃತ್ತ ನೌಕರರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ, ಏಳನೇ ವೇತನ ಆಯೋಗದ ನಿವೃತ್ತಿ ಸೌಲಭ್ಯ ಒದಗಿಸಿ, ನಿವೃತ್ತಿ ಸೌಲಭ್ಯ ಜೊತೆಗೆ ಆರ್ಥಿಕ ಸೌಲಭ್ಯ ನೀಡಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

