ಬಾಗಲಕೋಟ: ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರಕಾರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಅನುಸರಿಸಿಲ್ಲ, ಗ್ಯಾರಂಟಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

