Breaking News

ಅಮೆರಿಕದಲ್ಲಿ ಸೆಮಿಕಂಡಕ್ಟರ್ ಕಂಪನಿಗಳ ಮುಖ್ಯಸ್ಥರ ಜತೆ ಸಚಿವ ಎಂ ಬಿ ಪಾಟೀಲ್ ಮಾತುಕತೆ

ಅಮೆರಿಕ: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಮೆರಿಕದಲ್ಲಿ ಸೆಮಿ ಕಂಡಕ್ಟರ್ ಉದ್ಯಮದ ಜಾಗತಿಕ ಪ್ರಮುಖ ಕಂಪನಿಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಅಮೆರಿಕದ ಕಂಪನಿಗಳ ಜೊತೆಗೆ ಹೆಚ್ಚಿನ ಸಹಯೋಗದ ಅವಕಾಶಗಳನ್ನು ಸಚಿವರು ಚರ್ಚಿಸಿದ್ದಾರೆ.
ಸೆಮಿಕಂಡಕ್ಟರ್ ಅಭಿವೃದ್ಧಿ ಕೇಂದ್ರವಾಗಿ ಹೊರಹೊಮ್ಮುವ ರಾಜ್ಯದ ಮಹತ್ವಾಕಾಂಕ್ಷೆ ಸಾಕಾರಗೊಳ್ಳುವುದಕ್ಕೆ ಈ ಭೇಟಿಯು ನೆರವಾಗಲಿದೆ. ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, ಅಮೆರಿಕದ ಸೆಮಿಕಂಡಕ್ಟರ್ ವಲಯದ ನಾಲ್ಕು ಪ್ರಮುಖ ಕಂಪನಿಗಳಾದ ಯುಜೆನಸ್ ಟೆಕ್ನಾಲಜಿ, ಲ್ಯಾಮ್ ರಿಸರ್ಚ್, ಅಲ್ಫಾವೇವ್ ಸೆಮಿ ಮತ್ತು ಎಂಐಪಿಎಸ್ ಟೆಕ್ನಾಲಜೀಸ್‌ ಉನ್ನತ ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಸಚಿವರು ಉದ್ದಿಮೆಗಳ ಪ್ರಮುಖರಿಗೆ ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನವನ್ನೂ ನೀಡಿದ್ದಾರೆ.
ಯುಜೆಎನ್‌ಎಸ್‌ನ ಸಿಇಒ ಜೆಡಬ್ಲ್ಯು ಕಿಮ್ ಅವರ ಜೊತೆಗಿನ ಸಭೆಯಲ್ಲಿ, ಸಚಿವ ಪಾಟೀಲ ಅವರು, ಕರ್ನಾಟಕದಲ್ಲಿ ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ವಿಪುಲ ಅವಕಾಶಗಳು ಇರುವುದನ್ನು ವಿವರಿಸಿದರು. ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಉದ್ಯಮಕ್ಕೆ ನೆರವಾಗಲು, ಸುಧಾರಿತ ಸೆಮಿಕಂಡಕ್ಟರ್ ತಯಾರಿಕಾ ಉಪಕರಣಗಳನ್ನು ಒದಗಿಸುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ಇರುವ ಯುಜೆನಸ್ ಟೆಕ್ನಾಲಜಿಯ ಪರಿಣತಿ ಬಳಸಿಕೊಳ್ಳುವ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *