Breaking News

ರಾಜ್ಯ ಸರ್ಕಾರದಿಂದ ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಸಮಿತಿ ರಚನೆ

ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ.
ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ.
ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ, ಸಲಹೆಗಳನ್ನು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *