ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಇದರ ನಡುವೆ ವಿವಿಧ ಪಕ್ಷಗಳು ಭಿನ್ನವಾಗಿ ಪ್ರಚಾರ ನಡೆಸುತ್ತಿವೆ. ಇದೀಗ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ.
ಈ ಅಭಿಯಾನದ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ದಿನಾಂಕ ಇನ್ನು ಕೆಲವೇ ದಿನಗಳಲ್ಲಿ ಘೋಷಣೆಯಾಗಲಿದೆ. ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಚುನಾವಣಾ ಅಖಾಡಕ್ಕೆ ಧುಮುಕಿವೆ. ಇದೀಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಲಾಪತಾ ಲೇಡೀಸ್ (ಕಾಣೆಯಾದ ಮಹಿಳೆಯರು) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಅವರನ್ನು ಹೋಲುವಂತಹ ಚಿತ್ರವನ್ನೂ ಸಹ ಪೋಸ್ಟರ್‌ನಲ್ಲಿ ಬಳಸಲಾಗಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಇದೆ ಇದೀಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವು ಲಾಪತಾ ಲೇಡೀಸ್ ಅಭಿಯಾನ ಶುರು ಮಾಡಿದೆ. ಲಾಪತಾ ಲೇಡೀಸ್ ಎಂದರೆ ಕಾಣೆಯಾದ ಹೆಂಗಸರು ಎಂದರ್ಥ. ಮಹಾರಾಷ್ಟ್ರದಾದ್ಯಂತ ಈ ಮಾದರಿಯ ಪೋಸ್ಟರ್‌ಗಳನ್ನು ಕಾಂಗ್ರೆಸ್ ಅಂಟಿಸುತ್ತಿದೆ. ಈ ಪೋಸ್ಟರ್‌ನಲ್ಲಿ ಒಂದೇ ವರ್ಷದಲ್ಲಿ 64,000 ಸಾವಿರ ಮಹಿಳೆಯರ ನಾಪತ್ತೆ ಎಂದು ಉಲ್ಲೇಖಿಸಲಾಗಿದೆ. ಮಹಿಳೆಯರ ರಕ್ಷಣೆ ವಿಚಾರದಲ್ಲಿ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ದೂರಿದೆ. ಮಹಾರಾಷ್ಟ್ರದಲ್ಲಿ ಅಭಿಯಾನ ಪ್ರಾರಂಭಿಸಿದ್ದು, ಮರಾಠಿಯಲ್ಲಿ ಒಂದು ವರ್ಷದಲ್ಲಿ 64,000 ಸಾವಿರ ಮಹಿಳೆಯರ ನಾಪತ್ತೆಯಾಗಿದ್ದಾರೆ ಎಂದು ಬರೆಯಲಾಗಿದೆ. ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರದಲ್ಲಿ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಪ್ರಸ್ತಾಪಿಸಿದೆ.
ಈಚೆಗೆ ಮಹಾರಾಷ್ಟ್ರದ ಬದ್ಲಾಪುರ್ ಎನ್ನುವ ಪ್ರದೇಶದಲ್ಲಿ ಇಬ್ಬರು ಬಾಲಿಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಈ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಈಚೆಗೆ ಬದ್ಲಾಪುರ್ ಬದ್ಲಾ (ಬದ್ಲಾಪುರದ ಘಟನೆಗೆ ಪ್ರತೀಕಾರ) ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಹೇಳಿತ್ತು. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕೈಯಲ್ಲಿ ಬಂದೂಕು ಹಿಡಿದು ನಿಂತಿರುವ ಪೋಸ್ಟರ್ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಪಕ್ಷವು ಲಾಪತಾ ಲೇಡೀಸ್ ಪೋಸ್ಟರ್‌ಗಳು ವೈರಲ್ ಆಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

