Breaking News

ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟಿ ಡಿಕ್ಕಿ : ಕಾರ್ಪೊರೇಟರ್ ಮಗ ಗಂಭೀರವಾಗಿ ಗಾಯ

ಹುಬ್ಬಳ್ಳಿ: ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಾಲನೆ ಮಾಡುತ್ತಿದ್ದ ಕಾರ್ಪೊರೇಟರ್ ಮಗ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿ ಹೊರವಲಯದ ರಿಂಗ್ ರೋಡ್ ಬಳಿ ನಡೆದಿದೆ.

ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆಗಿರುವ ದೊರೆರಾಜ್ ಮಣಿಕುಂಟಲ್ ಅವರ ಮಗ ಪ್ರಥ್ವಿರಾಜ್ ಗಂಭೀರವಾಗಿ ಗಾಯಗೊಂಡ ಬಾಲಕ ಅಂತ ತಿಳಿದು ಬಂದಿದೆ. ಗದಗ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕ್ಯಾಂಟ‌ರ್ ವಾಹನಕ್ಕೆ ಗಟ್ಟೂರು ಕಡೆಯಿಂದ ಸ್ಕೂಟಿಯಲ್ಲಿ ವೇಗವಾಗಿ ಬಂದ ಪ್ರಥ್ವಿರಾಜ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಪ್ರಥ್ವಿರಾಜ್ ತಲೆಗೆ ಗಂಭೀರ ಗಾಯವಾಗಿದೆ.

ಕೂಡಲೇ ಗಾಯಾಳು ಪ್ರಥ್ವಿರಾಜ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *