ನವಲಗುಂದ: ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಹ್ಮಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಬೆಳಗಾವಿ ಅಧಿವೇಶನಕ್ಕೆ ನೂರ ವರ್ಷಗಳ ಸಂಭ್ರಮ ಆಚರಿಸುವ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಗಾಂಧಿ ಜಯಂತಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಆಚರಿಸಿ ಗಾಂಧೀಜಿ ಅವರ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಶಾಸಕ ಎನ್.ಹೆಚ್.ಕೋನರಡ್ಡಿ ಕರೆ ನೀಡಿದರು.
ಪಟ್ಟಣದ ಗಣೇಶ ದೇವಸ್ಥಾನದಿಂದ ಗಾಂಧಿ ನಡಿಗೆ ಪ್ರಾರಂಭವಾಗಿ ಗಾಂಧಿ ಮಾರ್ಕೆಟ್, ಲಿಂಗರಾಜ್ ಸರ್ಕಲ್, ಶಿಕ್ಷಕರ ಸಮುದಾಯ ಭವನ ಹಾಗೂ ತಹಶೀಲ್ದಾರ ಕಚೇರಿವರೆಗೆ ತಲುಪಲಿದೆ. ಈ ಮೆರವಣಿಗೆಯಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ನವಲಗುಂದ ಬ್ಲಾಕ್ ಅಧ್ಯಕ್ಷ ವರ್ದಮಾನಗೌಡ ಹಿರೆಗೌಡರ, ಅಣ್ಣಿಗೇರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಮಾಯಣ್ಣವರ, ಮಾಜಿ ಕೆಸಿಸಿ ಬ್ಯಾಂಕ್ ನಿರ್ದೇಶಕರಾದ ಬಾಪುಗೌಡ ಪಾಟೀಲ ಸೇರಿದಂತೆ ಪುರಸಭೆ ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

