Breaking News

ಅನಧಿಕೃತವಾಗಿ, ಹಾಕಲಾದ ಡಬ್ಬ ಅಂಗಡಿಗಳನ್ನು ತೆರವು ಗೊಳಿಸುವಂತೆ ಸೂಚನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ 51 ಅಕ್ಷಯ ಪಾರ್ಕ್, ಪ್ರಿಯದರ್ಶಿನಿ ಕಾಲೋನಿ ಹಾಗೂ ಮಹೇಶ್ ಪಿಯು ಕಾಲೇಜು ಎದುರುಗಡೆ ರಸ್ತೆಗಳಿಗೆ ಭೇಟಿ ನೀಡಿದ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ಅವರು, ಅಕ್ಷಯ ಪಾರ್ಕ್‌ನಿಂದ ಮುರ್ಡೇಶ್ವರ ಫ್ಯಾಕ್ಟರಿಗೆ ಹೋಗುವ ರಸ್ತೆಯ ಅಕ್ಕಪಕ್ಕ ಅನಧಿಕೃತವಾಗಿ, ಹಾಕಲಾದ ಡಬ್ಬ ಅಂಗಡಿಗಳನ್ನು ತೆರವು ಗೊಳಿಸುವಂತೆ ಸ್ಥಳದಲ್ಲಿ ಹಾಜರಿದ್ದ ವಲಯ ಸಹಾಯಕ ಆಯುಕ್ತರಾದ ಚಂದ್ರಶೇಖರ್ ಮಾಲಿಪಾಟೀಲ್‌ ಹಾಗೂ ಆರೋಗ್ಯ ನಿರೀಕ್ಷಕರಾದ ಸುನಿಲ್ ಕಾಡದೇವರಮಠ, ಮಹೇಶ್ ಕಾಟೆ ಯರಿಗೆ ನಿರ್ದೇಶನ ನೀಡಿದರು.

ಅಲ್ಲಿಂದ ಮಹೇಶ್ ಪಿಯು ಕಾಲೇಜು ಪಕ್ಕದಲ್ಲಿ ಅತಿಕ್ರಮಣ ಮಾಡಿ ಕಟ್ಟಿದಂತಹ ಕಟ್ಟಡವನ್ನು ಸರ್ವೆ ಇಲಾಖೆಯ ಅಧಿಕಾರಿಗಳ ಜೊತೆ ಪರಿಶೀಲಿಸಿದ ಆಯುಕ್ತರು ಅತಿಕ್ರಮಣವನ್ನು ತೆರವು ಗೊಳಿಸುವಂತೆ ಸೂಚಿಸಿದರು. ಅಲ್ಲದೇ ಎಆರ್‌ಟಿ ನಗರದ ಕಾಲೋನಿಗೆ ಭೇಟಿ ನೀಡಿದ ಆಯುಕ್ತರು, ಪಾಲಿಕೆಯ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಅತಿಕ್ರಮಣವನ್ನು ತೆರವು ಗೊಳಿಸುವಂತೆ ಸ್ಥಳದಲ್ಲಿ ಹಾಜರಿದ್ದ ವಲಯ ಸಹಾಯಕ ಆಯುಕ್ತರಿಗೆ ನಿರ್ದೇಶನ ನೀಡಿದರು. ಹಾಗೂ ಕಾಲೋನಿಯ ನಿವಾಸಿಗಳು ನೀಡಿದ ದೂರಿನ ಮೇರೆಗೆ ಜನವಸತಿ ಪ್ರದೇಶದಲ್ಲಿರುವ ಚಿಕನ್ ಅಂಗಡಿಯನು, ತಕ್ಷಣ ಮುಚ್ಚುವಂತೆ ಆದೇಶ ನೀಡಿದರು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *