ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ.
ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ.
ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.
ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

