Breaking News

ರಾಜ್ಯಾದ್ಯಂತ ನಾಳೆ ಪಿಎಸ್ಐ ಪರೀಕ್ಷೆ: ಕೆಇಎಯಿಂದ ಸಕಲ ಸಿದ್ಧತೆ

ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ ಕೆಇಎ ಕಠಿಣ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.
ಕಳೆದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬಿಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *