Breaking News

ಅ.23 ರಿಂದ ಕಿತ್ತೂರು ವಿಜಯ ಉತ್ಸವ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಕ್ಟೋಬರ್​ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ವಿಜಯ ಉತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್​ ಬಿಡುಗಡೆ ಮಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು ಎಂದು ತಿಳಿಸಿದರು.

Share News

About BigTv News

Check Also

ನಂಬಿಸಿ ಕೊಂದ ಪಾಪಿ ಪ್ರಿಯಕರ : ಶವ ಪೊದೆಗೆ ಎಸೆದು ನಾಪತ್ತೆ ನಾಟಕವಾಡಿದ್ದ ಯೋಧ ಜೈಲಿಗೆ

ಬೆಳಗಾವಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರಿಯತಮೆಯನ್ನು ಗೋಕಾಕ್ ಫಾಲ್ಸ್‌ಗೆ ಕರೆದೊಯ್ದು ಕೊಲೆ ಮಾಡಿದ ಆರೋಪದ ಮೇಲೆ ಎಸ್‌ಎಸ್‌ಬಿ ಯೋಧ ಬಸಪ್ಪ ಸಾತಣ್ಣವರ್‌ನನ್ನು …

Leave a Reply

Your email address will not be published. Required fields are marked *