Breaking News

ಸ್ವಚ್ಛತಾ ಅಭಿಯಾನದ ಅಂಗವಾಗಿ ಸಾರಿಗೆ ನೌಕರರಿಂದ ಸ್ವಯಂ ಪ್ರೇರಿತ ಸ್ವಚ್ಛತಾ ಕಾರ್ಯಕ್ರಮ

ಹುಬ್ಬಳ್ಳಿ: ಸ್ವಚ್ಚತಾ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಗೋಕುಲ ರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ 5 ಡಿಪೊಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಗಾಂಧೀ ಜಯಂತಿಯ ಮುನ್ನಾ ದಿನವಾದ ಅಕ್ಟೋಬರ್ 1ರಂದು ಗೋಕುಲ ರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು.
ನಿತ್ಯ ಬಸ್ಸುಗಳ ನಿರ್ವಹಣೆ, ದುರಸ್ತಿ ಮಾಡುವ ವಿಭಾಗೀಯ ಕಾರ್ಯಗಾರದ ತಾಂತ್ರಿಕ ಸಿಬ್ಬಂದಿಗಳು, ಘಟಕಗಳ ಚಾಲಕರು, ನಿರ್ವಾಹಕರು, ಮೇಲ್ವಿಚಾರಕರು ಹಾಗೂ ಅಧಿಕಾರಿಗಳು ಸೇರಿದಂತೆ ಸಾರಿಗೆ ಸಿಬ್ಬಂದಿಗಳು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆ ನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *