ರಾಂಚಿ: ಸುಮಾರು 80,000 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಯೋಜನೆಯು ಸುಮಾರು 63,000 ಬುಡಕಟ್ಟು ಜನರಿರುವ ಹಳ್ಳಿಗಳ ಅಭಿವೃದ್ಧಿಗೆ ಒಳಪಡಲಿದೆ 5 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯು ಭಗವಾನ್ ಬಿರ್ಸಾ ಮುಂಡಾ ಭೂಮಿಯಿಂದ ಪ್ರಾರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ 83,300 ಕೋಟಿ ರೂಪಾಯಿಗಳ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಿದರು. ಕಳೆದ 17 ದಿನಗಳಲ್ಲಿ ಎರಡನೇ ಬಾರಿಗೆ ಪ್ರಧಾನಿ ಮೋದಿಯವರು ಜಾರ್ಖಂಡ್‌ಗೆ ಭೇಟಿ ನೀಡಿದ್ದಾರೆ.
ಪ್ರಧಾನಿ ಆವಾಸ್ ಯೋಜನೆ ಅಡಿಯಲ್ಲಿ ಜಾರ್ಖಂಡ್‌ನ ಸಾವಿರಾರು ಬಡವರು ತಮ್ಮದೇ ಆದ ಪಕ್ಕಾ ಮನೆಯನ್ನು ಪಡೆದುಕೊಂಡಿದ್ದಾರೆ. ಇದೀಗ, ಜಾರ್ಖಂಡ್‌ನಲ್ಲಿ ಇಂದು 80 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಾಗಿದೆ. ಈ ಯೋಜನೆಗಳು ಬುಡಕಟ್ಟು ಸಮಾಜದ ಕಲ್ಯಾಣ ಮತ್ತು ಉನ್ನತಿಗೆ ಸಂಬಂಧಿಸಿದೆ ಎಂದು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

