Breaking News

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಕನ್ನಡದಲ್ಲೆ ಪರೀಕ್ಷೆ ಬರೆಯಲು ಅವಕಾಶ

ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ, ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.
ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *