Breaking News

ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ: ತಡರಾತ್ರಿವರೆಗೂ ಕಡತಗಳಿಗೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನವರಿಗೆ ಸಾಲು ಸಾಲು ಹಿನ್ನಡೆಯಾದ ಬೆನ್ನಲ್ಲೇ ತಮ್ಮ ಮುಂದಿರುವ ಕಡತ ವಿಲೇವಾರಿಗೆ ಹೆಚ್ಚು ಆದ್ಯತೆ ನೀಡಿದ್ದು, ತಡರಾತ್ರಿಯವರೆಗೆ ಕುಳಿತು ವರ್ಗಾವಣೆ ಹಾಗೂ ಇನ್ನಿತರ ಪ್ರಮುಖ ಕಡತಗಳಿಗೆ ಸಹಿ ಹಾಕಿದ್ದಾರೆ.
ಬುಧವಾರ ಇಡೀ ಗಾಂಧಿ ಜಯಂತಿಯಲ್ಲಿ ಸಿಎಂ ಪಾಲ್ಗೊಂಡಿದ್ದು, ಗುರುವಾರ ಅಂದರೆ ಇಂದು ದಸರಾ ಕಾರ್ಯಕ್ರಮಕ್ಕೆ ಮೈಸೂರಿಗೆ ತೆರಳಿದ್ದಾರೆ. ಜೊತೆಗೆ ಶುಕ್ರವಾರ ಹಾಗೂ ಶನಿವಾರ ಎರಡು ದಿನ ರಾಯಚೂರು ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನಲೆ ಮಂಗಳವಾರವೇ ಎಲ್ಲಾ ಕಡತಗಳಿಗೆ ಸಿಎಂ ತಡರಾತ್ರಿವರೆಗೆ ಸಹಿ ಹಾಕಿದ್ದಾರೆ.
ವಿಧಾನ ಸೌಧದಿಂದ ನೇರವಾಗಿ ಮನೆಗೆ ತೆರಳಿ ರಾತ್ರಿ ಊಟ ಮುಗಿಸಿದ ಅನಂತರ ಮಧ್ಯರಾತ್ರಿ 2 ಗಂಟೆವರೆಗೆ ಕಡತಗಳಿಗೆ ಸಹಿ ಮಾಡಿದ್ದಾರೆ. ಈ ಪೈಕಿ ಬಹುತೇಕ ವರ್ಗಾವಣೆಗೆ ಸಂಬಂಧಿಸಿದ ಕಡತಗಳೇ ಇದ್ದವು. ಅದಲ್ಲದೆ ಇನ್ನೂ ಕೆಲ ಪ್ರಮುಖ ಕಡತಗಳಿಗೂ ಸಹಿ ಮಾಡಿದ್ದಾರೆ ಎಂದು ವರದಿಯಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *