Breaking News

ನಾಡಿಗೆಲ್ಲ ಅಹಿಂಸಾ ಧರ್ಮವನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ : ಮಾಬುಸಾಬ ಯರಗುಪ್ಪಿ

ನವಲಗುಂದ: ನಾಡಿಗೆಲ್ಲ ಅಹಿಂಸಾ ಧರ್ಮವನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಪ್ರತಿಯೊಬ್ಬರ ಮನದಲ್ಲಿ ಅಚ್ಚಳಿಯದೇ ಉಳಿದಿದ್ದು ಅವರನ್ನೆಲ್ಲ ನೆನೆದು ಗೌರವ ಸಮರ್ಪಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಮಾದರಿ ಕೇಂದ್ರ ಶಾಲೆ ನಂ-3ರಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹಾದ್ದೂ‌ರ್ ಶಾಸ್ತ್ರಿಜಿಯವರ ಜಯಂತಿಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಬ್ರಿಟಿಷರಿಂದ ಅಹಿಂಸಾ ಮಾರ್ಗದ ಮೂಲಕ ನಮ್ಮ ದೇಶವನ್ನು ಸ್ವಾತಂತ್ರ್ಯ ಮುಕ್ತ ಮಾಡುವಲ್ಲಿ ಬಾಪೂಜಿಯವರ ಪಾತ್ರ ಬಹು ಮುಖ್ಯವಾಗಿದ್ದು, ಭಾರತೀಯರ ಮನದಲ್ಲಿ ರಾಷ್ಟ್ರಪ್ರೇಮವನ್ನು ಮೆರೆಸಿದವರು ಗಾಂಧೀಜಿಯವರು, ಅಂತಹ ಮಹಾತ್ಮಾ ಗಾಂಧೀಜಿಯವರ ಬದುಕು ಮತ್ತು ತತ್ವಗಳನ್ನು ನೆನೆಯುವುದರ ಜೊತೆಗೆ ಇನ್ನೊಬ್ಬ ಮಹಾನ್ ವ್ಯಕ್ತಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಹೋರಾಟ ಮತ್ತು ತ್ಯಾಗ ಬಲಿದಾನವನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ಅವರು ನಮ್ಮ ದೇಶದ ಪ್ರಧಾನಮಂತ್ರಿಯಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ತಮ್ಮದೆಯಾದ ಕೊಡುಗೆ ನೀಡಿದ್ದಾರೆ ಎಂದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *