Breaking News

ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ರಾಯಚೂರು ಬಂದ್ ಗೆ ಕರೆ

ರಾಯಚೂರು: ಪರಿಶಿಷ್ಟ ಜಾತಿಯ ಮಾದಿಗ ಸಂಬಂಧಿತ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ‌ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ದಲಿತ ಪರಸಂಘಟನೆಗಳು ಇಂದು ರಾಯಚೂರು ಬಂದ್‌ಗೆ ಕರೆ ನೀಡಿದೆ.
ಅಂಗಡಿ ಮುಂಗಟ್ಟು‌ಗಳು ಸಹ ವ್ಯಾಪಾರ ಸ್ಥಗಿತಗೊಳಿಸುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ನಗರದ ಉಸ್ಮಾನಿಯ ತರಕಾರಿ ಮಾರುಕಟ್ಟೆಯನ್ನು ಬಂದ್​ ಮಾಡಲಾಗಿದೆ. ಬಂದ್​ ಪರಿಣಾಮ ಬಸ್ ಸಂಚಾರ ಸಹ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ. ದೂರದೂರಿಗೆ ತೆರಳಬೇಕಿದ್ದ ಪ್ರಯಾಣಿಕರು ಬಸ್‌ ಸಂಚಾರ ಇಲ್ಲದೇ ಖಾಸಗಿ ವಾಹನಗಳಲ್ಲಿ ಸಂಚರಿಸುವ ದೃಶ್ಯ ಕಂಡು ಬಂದಿತು.
ಇನ್ನು ನಗರದ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ, ಬಂದ್​ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತವಾಗಿ ಬಿಗಿಬಂದೋ ಬಸ್ತ್ ನಿಯೋಜನೆ ಮಾಡಿದ್ಧಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *