Breaking News

ಡಿಮ್ಹಾನ್ಸ್ ನ ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸಿದ್ಧಲಿಂಗಯ್ಯ ಹಿರೇಮಠ ನೇಮಕ

ಧಾರವಾಡ : ನಗರದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸೂಪರ್ ಟೈಂ ಸ್ಕೇಲ್‌ನ ಹಿರಿಯ ಕೆ.ಎ.ಎಸ್. ಅಧಿಕಾರಿ ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ ಗುರುವಾರ ಅಧಿಕಾರ ವಹಿಸಿಕೊಂಡರು.
ಮೂಲತಃ ವಿಜಯಪೂರ ಜಿಲ್ಲೆಯವರಾದ ಇವರು, 2008ರಲ್ಲಿ ಕರ್ನಾಟಕ ಆಡಳಿತ ಸೇವೆ (ಕೆ.ಎ.ಎಸ್.) ಪರೀಕ್ಷೆಯಲ್ಲಿ ರಾಜ್ಯಕ್ಕೇ 5ನೆಯ ರಾಂಕ್ ಪಡೆದು ಅಸಿಸ್ಟೆಂಟ್ ಕಮೀಷನರ್ ಆಗಿ ಆಯ್ಕೆಗೊಂಡ ಇವರು, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಧಾರವಾಡ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾಗಿ, ಹುಬ್ಬಳ್ಳಿ ಹೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಹಾಗೂ ಪುನರ್ವಸತಿಯ ಪ್ರಧಾನ ವ್ಯವಸ್ಥಾಪಕರಾಗಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತರಾಗಿ ಉತ್ಕೃಷ್ಟ ಸೇವೆ ಸಲ್ಲಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *